ಚಿಕ್ಕಮಗಳೂರು: ಆಟವಾಡುತ್ತಿದ್ದ ಜೋಕಾಲಿಯೇ ಮಗುವಿನ ಪಾಲಿಗೆ ಮೃತ್ಯುಪಾಶವಾದ ದಾರುಣ ಘಟನೆಯೊಂದು ಚಿಕ್ಕಮಗಳೂರು ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೆಬ್ಬಳ್ಳಿ ಗ್ರಾಮದ ನಿವಾಸಿ ಲೇಖನಾ (10) ಮೃತಪಟ್ಟ ದುರ್ದೈವಿ ಬಾಲಕಿ. ಆಟದ ಗುಂಗಿನಲ್ಲಿದ್ದ ಮಗು ಅಚಾತುರ್ಯದಿಂದ ಪ್ರಾಣ ಕಳೆದುಕೊಂಡಿರುವುದು ಇಡೀ ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ. ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಾಲಕಿ ಲೇಖನಾ ಮನೆಯೊಳಗೆ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಠಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಗ್ರಾಮದ ನಿವಾಸಿ ಶಿವಶಂಕರ್ (40) ಕೊಲೆಯಾದ ದುರ್ದೈವಿ. ಸ್ವಂತ ಮನೆಯ ಆವರಣದಲ್ಲೇ ಈ ರಕ್ತಪಾತ ನಡೆದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸೋಮವಾರ ರಾತ್ರಿ ಶಿವಶಂಕರ್ ಅವರು ಮನೆಯ ಆವರಣದಲ್ಲಿದ್ದಾಗ ಏಕಾಏಕಿ ನುಗ್ಗಿದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದೆ. ತೀವ್ರ ರಕ್ತಸ್ರಾವದಿಂದಾಗಿ ಶಿವಶಂಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ…