ವಿಜಯಪುರ: ಕೇವಲ ಬಾಹ್ಯ ರೂಪದ ಹೋಲಿಕೆಯಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಹಾಗೂ ಹಳ್ಳಿಗರ ಚೇಷ್ಟೆಯ ಮಾತಿಗೆ ಮರುಳಾದ ತಂದೆಯೊಬ್ಬ ತನ್ನ ಆರು ವರ್ಷದ ಮಗನನ್ನೇ ನದಿಗೆ ತಳ್ಳಿ ಬರ್ಬರವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಗಠಾಣ ಗ್ರಾಮದ ಆರು ವರ್ಷದ ಬಾಲಕ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ ಹತ್ಯೆಯಾದ ದುರ್ದೈವಿ. ಸ್ವಂತ ಮಗನನ್ನೇ ಕೊಂದ ಆರೋಪಿ ತಂದೆ ಮಲ್ಲಿಕಾರ್ಜುನ ಅರಕೇರಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿ ಮಲ್ಲಿಕಾರ್ಜುನನಿಗೆ ತನ್ನ ಮಗ ಸಿದ್ದಾರ್ಥ ನೋಡಲು…
ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕಿಡಿಗೇಡಿಯೊಬ್ಬ ಹಚ್ಚಿದ ಬೆಂಕಿಯಿಂದಾಗಿ 6 ಅಮಾಯಕ ಹಸುಗಳು ಸಜೀವ ದಹನವಾಗಿವೆ. ನಾಯಿಗಳನ್ನು ಹೆದರಿಸಲು ಕಸಕ್ಕೆ ಬೆಂಕಿ ಹಚ್ಚಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಈ ಕೃತ್ಯದ ಹಿಂದಿನ ನಿಜವಾದ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿಯ ಶಾಂಪುರ ರಸ್ತೆಯಲ್ಲಿರುವ ಪ್ಲೈವುಡ್ ಅಂಗಡಿಯೊಂದರಲ್ಲಿ ಸೋಮವಾರ ತಡರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲಿ ಪಕ್ಕದಲ್ಲಿದ್ದ ಶ್ರೀನಿವಾಸ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗೆ ವ್ಯಾಪಿಸಿದೆ. ಈ ದುರ್ಘಟನೆಯಲ್ಲಿ…