ಚಿತ್ರದುರ್ಗ: ಮದುವೆಯಾದ ಸಂಭ್ರಮದ ದಿನವೇ ನವವಿವಾಹಿತೆಯೊಬ್ಬಳು ದಾರುಣವಾಗಿ ಕೊಲೆಯಾದ ಭೀಕರ ಘಟನೆಗೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ತಿರುವು ಸಿಕ್ಕಿದ್ದು, ಗಂಡನ ಸ್ನೇಹಿತರೇ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಎನ್. ಮಹದೇವಪುರ ಬಳಿ ಈ ಘಟನೆ ನಡೆದಿದ್ದು, 20 ವರ್ಷದ ಸುಮಲತ ಕೊಲೆಯಾದ ದುರದೃಷ್ಟಕರ ನವವಿವಾಹಿತೆ. ಮದುವೆಯಾದ ದಿನವೇ ಈಕೆಯ ಮೇಲೆ ಗಂಡನ ಸ್ನೇಹಿತರು ಅತ್ಯಾಚಾರ ಎಸಗಿ, ಬಳಿಕ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೃತ್ಯ ಎಸಗಿದ…
ಧಾರವಾಡದಲ್ಲಿ ಕೆಪಿಎಸ್‌ಸಿ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ‘ಅಕ್ಸಾ’ ಸಂಘಟನೆಯ ಮುಖಂಡ ಕಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೋರಾಟಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದರೂ ಪ್ರತಿಭಟನೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಿಚಿಗನ್ ಮೈದಾನದಲ್ಲಿ ಬಿಗಿ ಭದ್ರತೆ ಧಾರವಾಡದ ಮಿಚಿಗನ್ ಮೈದಾನದಲ್ಲಿ ‘ಅಕ್ಸಾ’ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಲಾಗಿತ್ತು. ಆದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ…