ಮದ್ದೂರು: ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ. ವೃತ್ತದ ಬಳಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದ ಹರೀಶ್ ಎಂಬಾತನೇ ಈ ಅಪಘಾತ ಎಸಗಿದ ಚಾಲಕ. ಮನೆಯಲ್ಲಿ ಯಾರಿಗೂ ಹೇಳದೆ ಕಾರು ತೆಗೆದುಕೊಂಡು ಬಂದಿದ್ದ ಈತ, ಮದ್ದೂರಿನ KSRTC ಬಸ್ ನಿಲ್ದಾಣ ಹಾಗೂ ಟಿ.ಬಿ. ವೃತ್ತದ ಬಳಿ ಸಿಕ್ಕ ಸಿಕ್ಕ…
ಗದಗ (ಆ. 17): ನಗರದಲ್ಲಿ ನಡೆದ ಮಾನಸಿಕ ಅಸ್ವಸ್ಥ ಯುವತಿಯ ಮೇಲಿನ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಸಂತ್ರಸ್ತೆ ಮೂರು ತಿಂಗಳ ಗರ್ಭಿಣಿಯಾದ ಬಳಿಕ ಈ ಕೃತ್ಯ ಬೆಳಕಿಗೆ ಬಂದಿದೆ. ಬೆಟಗೇರಿಯ ನಿವಾಸಿಗಳಾದ ಸಿಕಂದರ ಬೇಪಾರಿ, ಶಬ್ಬೀರ ಅಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಎಂಬುವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೃತ್ಯ ಮುಚ್ಚಿಹಾಕಲು ಅಕ್ರಮ ಗರ್ಭಪಾತ:…