ಚಿಕ್ಕಬಳ್ಳಾಪುರ: ಗಂಡನ ಮನೆಯಲ್ಲಿ ಕಿರುಕುಳ ಮತ್ತು ತವರು ಮನೆಯಲ್ಲಿ ಅನುಭವಿಸಿದ ಅವಮಾನದಿಂದ ಬೇಸತ್ತು ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಹೆಣ್ಣು ಮಕ್ಕಳ ತಾಯಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಚೊಕ್ಕನಹಳ್ಳಿಯಲ್ಲಿ ನಡೆದಿದೆ. ಇನವಿಂಚನಹಳ್ಳಿ ಮೂಲದ ಚೈತ್ರಾ (28) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ವಿವರ: ಮೃತ ಚೈತ್ರಾಗೆ 14 ವರ್ಷಗಳ ಹಿಂದೆ ದೇವನಹಳ್ಳಿ ತಾಲೂಕಿನ ನಲಪ್ಪನಹಳ್ಳಿಯ ವ್ಯಕ್ತಿಯೊಂದಿಗೆ…
ಹಾಸನ: ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ಹಾಡಹಗಲೇ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಚನ್ನಪಟ್ಟಣ ಸರ್ಕಲ್ ಸಮೀಪದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ನಡೆದಿದೆ. ಹಾಸನ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಸಿದ್ದಯ್ಯನಗರ ಬಡಾವಣೆಯಲ್ಲಿ ವಾಸವಿದ್ದ ಮಣಿ ಅಲಿಯಾಸ್ ಮಣಿಕಂಠ (೨೫) ಕೊಲೆಯಾದ ಯುವಕ. ಈತ ನಗರದ ೮೦ ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಉದ್ಯೋಗಿಯಾಗಿದ್ದ. ಗೃಹಪ್ರವೇಶಕ್ಕೆ ತೆರಳುತ್ತಿದ್ದಾಗ ಕೃತ್ಯ: ಮಣಿಕಂಠ ಸಂಬಂಧಿಕರ…