ವಿಜಯಪುರ, ಆ. 7: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಪ್ರಸಿದ್ಧ ಪವಾಡ ಬಸವೇಶ್ವರ ದೇಗುಲದಲ್ಲಿ ನಡೆದಿದ್ದ 51 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಗುಜರಾತ್ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ದೇವಸ್ಥಾನದಿಂದ ಸುಮಾರು 32 ಕೆ.ಜಿ. ತೂಕದ ಬೆಳ್ಳಿ ಮೂರ್ತಿಯನ್ನು ಕಳ್ಳತನ ಮಾಡಲಾಗಿತ್ತು. ಕಳವು ಮಾಡಿದ ಬಳಿಕ ಆರೋಪಿಗಳು ಮೂರ್ತಿಯನ್ನು ಕರಗಿಸಿ ಬೆಳ್ಳಿ ಗಟ್ಟಿಗಳಾಗಿ ಪರಿವರ್ತಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. …
ಯಾದಗಿರಿ,: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿಲ್ ಲ್ಯಾಬೋರೇಟರಿ (Seal Laboratory) ಕಂಪನಿಯಲ್ಲಿ ವಿಷಕಾರಿ ಕೆಮಿಕಲ್ ಸೋರಿಕೆಯಾಗಿ, ತೀವ್ರ ಉಸಿರಾಟದ ತೊಂದರೆಯಿಂದ ಕಾರ್ಮಿಕರು ಮೃತಪಟ್ಟಿರುವ ದುರಂತ ಸಂಭವಿಸಿದೆ. ಕಂಪನಿಯ ಪ್ರೊಡಕ್ಷನ್ ಘಟಕದಲ್ಲಿ ರಾಸಾಯನಿಕ ವಸ್ತುಗಳ ಉತ್ಪಾದನೆ ನಡೆಯುತ್ತಿದ್ದ ವೇಳೆ ಏಕಾಏಕಿ ಕೆಮಿಕಲ್ ಸೋರಿಕೆಯಾಗಿದೆ. ನೋಡನೋಡುತ್ತಿದ್ದಂತೆಯೇ ಘಟಕದಾದ್ಯಂತ ವಿಷಾನಿಲ ಆವರಿಸಿಕೊಂಡಿದ್ದು, ಕಾರ್ಯನಿರತರಾಗಿದ್ದ ಕಾರ್ಮಿಕರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹೋದ್ಯೋಗಿಗಳು ಅಸ್ವಸ್ಥರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ, ಚಿಕಿತ್ಸೆ ಫಲಿಸದೆ ಕೆಲ…