ಹಾವೇರಿ: ತಾಲೂಕಿನ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕುರಿ ಕಳ್ಳತನ ಪ್ರಕರಣವನ್ನು ಗುತ್ತಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳುವಾಗಿದ್ದ ಕುರಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪ್ರಕರಣವನ್ನು ಶೀಘ್ರವಾಗಿ ಭೇದಿಸಿ, ಕಳುವಾದ ಆಸ್ತಿಯನ್ನು ಮರುಪಡೆಯುವಲ್ಲಿ ಯಶಸ್ವಿಯಾದ ಗುತ್ತಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ…
ಕೋಲಾರ: “ಮನೆಯಲ್ಲೇ ಕುಳಿತು ಕೆಲಸ ಮಾಡಿ, ತಿಂಗಳಿಗೆ ಬಂಪರ್ ಗಳಿಸಿ” ಎಂಬ ಆಕರ್ಷಕ ಆಮಿಷಕ್ಕೆ ಬಿದ್ದು, ನೂರಾರು ಜನರು ಕೋಟ್ಯಂತರ ರೂಪಾಯಿ ಕಳೆದುಕೊಂಡು ಬೀದಿಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಕೋಲಾರದ ಪಾಲಸಂದ್ರ ಬಡಾವಣೆಯಲ್ಲಿ ಕಾರ್ಯಾಚರಿಸುತ್ತಿದ್ದ ‘ಶ್ರೀ ಕಾಳಿಕಾದೇವಿ ಎಂಟರ್‌ಪ್ರೈಸಸ್’ ಎಂಬ ಸಂಸ್ಥೆ ಈ ಬೃಹತ್ ವಂಚನೆ ಎಸಗಿದೆ. ಮನೆಯಲ್ಲೇ ಕುಳಿತು ಊದುಬತ್ತಿ ಹಾಗೂ ಕರ್ಪೂರದ ಕಚ್ಚಾ ವಸ್ತುಗಳನ್ನು ಪ್ಯಾಕ್ ಮಾಡಿ ಕೊಟ್ಟರೆ ಭಾರಿ ಮೊತ್ತದ ಲಾಭ ಮತ್ತು ಸಂಬಳ ನೀಡುವುದಾಗಿ ಜನರನ್ನು ನಂಬಿಸಲಾಗಿತ್ತು….