ಚಿಂತಾಮಣಿ: ನಗರದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ನಗರದ ವಿವಿಧ ಜಿಮ್ (ಫಿಟ್ನೆಸ್) ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಪೊಲೀಸರು, ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ ಜಿಮ್‌ಗೆ ಆಗಮಿಸುವ ಯುವಕರಿಗೆ ವಿಸ್ತಾರವಾಗಿ ವಿವರಿಸಿದರು. ದೈಹಿಕ ದೃಢತೆ ಬೆಳೆಸಿಕೊಳ್ಳಲು ಜಿಮ್‌ಗೆ ಬರುವ ಯುವಕರು ಯಾವುದೇ ಕಾರಣಕ್ಕೂ…
ಶಿಡ್ಲಘಟ್ಟ: ನಗರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಕಾರ್ಯಾಚರಣೆ ನಡೆಸಿದ ಶಿಡ್ಲಘಟ್ಟ ನಗರ ಪೊಲೀಸರು, ಕುಖ್ಯಾತ ಅಂತರರಾಜ್ಯ ಕಳ್ಳನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಮೂಲದ ಜಿ.ರಾಮಕೃಷ್ಣ (60) ಬಂಧಿತ ಆರೋಪಿ. ಈತ ಕರ್ನಾಟಕ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 11 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯಾಗಿದ್ದಾನೆ. ಕಳೆದ ಜುಲೈ 22,…