ಮೈಸೂರು: ನಗರದ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಿರುವ ಬಗ್ಗೆ ನೀಡಿ ದೂರಿನ ಮೇರೆಗೆ, ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ನೀಡಿದ್ದಾರೆ. ದೂರು ಸ್ವೀಕರಿಸಿದ ದೇವರಾಜ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡವು CEIR (Central Equipment Identity Register) ಪೋರ್ಟಲ್‌ನ ತಾಂತ್ರಿಕ ನೆರವನ್ನು ಬಳಸಿಕೊಂಡು ತೀವ್ರ ಶೋಧ ನಡೆಸಿದರು. ಈ ಮೂಲಕ ಒಟ್ಟು 27 ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚುವಲ್ಲಿ…
ಶಿಡ್ಲಘಟ್ಟ: ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದರಿಂದ ಗಂಭೀರ ಅಪಘಾತಗಳು ಸಂಭವಿಸುವ ಅಪಾಯವಿರುವ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನ ಚಾಲನೆ ವೇಳೆ ಮೊಬೈಲ್ ಬಳಸುತ್ತಿದ್ದ ಸವಾರರನ್ನು ಗುರುತಿಸಿ ಸ್ಥಳದಲ್ಲೇ ದಂಡ ವಿಧಿಸಲಾಗಿದೆ. ಅಪಘಾತಗಳನ್ನು ತಡೆಯಲು ಮತ್ತು ಸಾರ್ವಜನಿಕರಲ್ಲಿ ಸುರಕ್ಷತಾ ಪ್ರಜ್ಞೆ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದ್ದು,…