ಬೆಂಗಳೂರು: “ಕರ್ನಾಟಕ ಪೊಲೀಸರು ಏನು ಮಾಡುತ್ತಾರೆ ನೋಡೋಣ” ಎಂದು ಬಹಿರಂಗವಾಗಿಯೇ ಸವಾಲು ಹಾಕಿದ್ದ ಅಂತರರಾಷ್ಟ್ರೀಯ ಡ್ರಗ್ ಜಾಲದ ಕಿಂಗ್‌ಪಿನ್ ಸೇರಿದಂತೆ ನಾಲ್ವರು ಅಪಾಯಕಾರಿ ಪೆಡ್ಲರ್‌ಗಳನ್ನು ಹೆಬ್ಬಾಳ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 34 ಕೋಟಿ ರೂಪಾಯಿ ಮೌಲ್ಯದ 17 ಕೆಜಿ 580 ಗ್ರಾಂ ತೂಕದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧರಿಸಿ ಹೆಬ್ಬಾಳ ಪೊಲೀಸರು ದೇಶದ ವಿವಿಧೆಡೆ ದಾಳಿ ನಡೆಸಿ ಈ ಕೆಳಗಿನ ನಾಲ್ವರನ್ನು ಸದ್ಯ ಜೈಲಿಗಟ್ಟಿದ್ದಾರೆ: ಸೊಲೊಮನ್ ಟಚುಕ್ಯೂ…
ಬೆಂಗಳೂರು: ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯೊಬ್ಬಳಿಗೆ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಚ್.ಎ.ಎಲ್ ರಸ್ತೆಯ ಕೋಡಿಹಳ್ಳಿಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾಗಿ ತೀವ್ರ ರಕ್ತಸ್ರಾವದಿಂದ ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಅಮೃತ, ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಸಹೋದರರಾದ ಸೂರ್ಯ ಹಾಗೂ ಧನುಷ್ ಎಂಬ ಇಬ್ಬರು ಆರೋಪಿಗಳನ್ನು ಜೀವನಭೀಮಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೃತ ಅಮೃತ ಲಾ ವಿದ್ಯಾರ್ಥಿನಿಯಾಗಿದ್ದು,…