ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಅತ್ಯಂತ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಜೈಲು ಅಧೀಕ್ಷಕರು ಸೇರಿದಂತೆ ಒಟ್ಟು ಎಂಟು ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಜೈಲಾಧಿಕಾರಿಗಳ ಗಂಭೀರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ಕುರಿತು ‘ಪೊಲೀಸ್ ರೌಂಡಪ್’ ಸಾಕ್ಷಿ ಸಮೇತ ನಿರಂತರವಾಗಿ ಸರಣಿ ವರದಿಗಳನ್ನು ಪ್ರಸಾರ ಮಾಡಿತ್ತು. ಈ ವರದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು, ಕರ್ತವ್ಯಲೋಪ…
ವಿಜಯಪುರ: ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಡಿ ಬೆಳಗಾವಿ ಉತ್ತರ ವಲಯದ ಐದು ಜಿಲ್ಲೆಗಳಲ್ಲಿ ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ವಿಶೇಷ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕರಾದ (IGP) ಸಂದೀಪ್ ಪಾಟೀಲ್ ಅವರು ತಿಳಿಸಿದರು. ಬುಧವಾರ ವಿಜಯಪುರ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನತೆಯನ್ನು ಮಾದಕ ವ್ಯಸನದಂತಹ ದುಷ್ಟ ಚಟಗಳಿಂದ…