ಮಾಲೂರು: ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ್ ಮೂರ್ತಿ ಎಂಬುವವರು ತಾಲೂಕಿನ ದೊಡ್ಡಡೊಡ್ಡಿ ಗ್ರಾಮದ ತಮ್ಮ ಸ್ವಂತ ಮನೆಯಲ್ಲೇ ಕಾನೂನುಬಾಹಿರವಾಗಿ ಅನಧಿಕೃತ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ದಾಳಿಯ ವಿವರ: ಸಾಮಾಜಿಕ ಹೋರಾಟಗಾರ ಮೋಹನ್ ಎನ್. ಅವರು ನೀಡಿದ ದೂರಿನ ಆಧಾರದ ಮೇಲೆ ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಹಾಗೂ ಮಾಲೂರು ತಾಲೂಕು ಆರೋಗ್ಯಾಧಿಕಾರಿಗಳ (THO) ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಪರಿಶೀಲನೆ…
ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪೇಯಿಂಗ್ ಗೆಸ್ಟ್ (PG) ವಸತಿ ನಿಲಯಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ 23 ಪಿಜಿಗಳಿಗೆ ನೋಟಿಸ್ ನೀಡಿದ್ದಾರೆ. ನಗರದಾದ್ಯಂತ ಒಟ್ಟು 64 ಪಿಜಿಗಳಲ್ಲಿ ವ್ಯಾಪಕ ತಪಾಸಣೆ ಕೈಗೊಂಡ ಅಧಿಕಾರಿಗಳ ತಂಡ, ನೈರ್ಮಲ್ಯ ಕೊರತೆ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಗಾಳಿಗೆ ತೂರಿದ ಎಷ್ಟೋ ಪಿಜಿಗಳ ಅಡುಗೆ ಮನೆಗಳನ್ನು ಪರಿಶೀಲಿಸಿತು. ಈ ವೇಳೆ ಹಲವು ಕಡೆಗಳಲ್ಲಿ ಅವಧಿ ಮೀರಿದ…