ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ, ಹೆತ್ತವರ ವಿರೋಧ ಕಟ್ಟಿ ಕೊಂಡು ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬಳು ಕೇವಲ ಮೂರೇ ತಿಂಗಳಲ್ಲಿ ಪತಿ ಹಾಗೂ ಆತನ ಅಕ್ಕನ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ದಾರುಣ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಲಕ್ಷ್ಮಣ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಶ್ವೇತಾ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಪತಿ ಮೂರ್ತಿಯನ್ನು ರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತ ಶ್ವೇತಾ ಖಾಸಗಿ…
ಮೈಸೂರು: ಮುಂಬರುವ ಪವಿತ್ರ ಆಷಾಢ ಮಾಸದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುರಕ್ಷಿತ ಹಾಗೂ ಸುಗಮ ದರ್ಶನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ ಅವರು ಇಂದು ಜಂಟಿ ಸ್ಥಳ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. (KSRTC) ಅಧಿಕಾರಿಗಳು ಹಾಗೂ ಚಾಮುಂಡಿ ಬೆಟ್ಟದ ಪ್ರಾಧಿಕಾರದ ಅಧಿಕಾರಿಗಳನ್ನೊಳಗೊಂಡ ಜಂಟಿ ತಂಡದೊಂದಿಗೆ ಬೆಟ್ಟಕ್ಕೆ ಭೇಟಿ ನೀಡಿದ ಆಯುಕ್ತರು, ಭಕ್ತರ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ…