ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲೇ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಜುಲೈ 10ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆರೋಪಿ ಇರ್ಫಾನ್ ಮಂಗಳೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದನು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಬಸ್‌ನಲ್ಲಿ ಈ…
ಗದಗ: ಬಡ್ಡಿ ದಂಧೆಕೋರರ ನಿರಂತರ ಕಿರುಕುಳ ಹಾಗೂ ಬೆದರಿಕೆಗೆ ಮನನೊಂದು ವ್ಯಕ್ತಿಯೊಬ್ಬರು ಸೆಲ್ಫಿ ವಿಡಿಯೋ ಹಾಗೂ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಕರೆಮ್ಮಕಲ್ ಬಡಾವಣೆಯ ನಿವಾಸಿ ಸಂಪತ್ ದಂಡಗಿ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವರು ಸಂಪತ್ ಅವರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ಹಾಗೂ ಬೆದರಿಕೆ ಹಾಕುತ್ತಿದ್ದರು…