ನಂಜನಗೂಡು: ಮೈಕ್ರೋ ಫೈನಾನ್ಸ್ ಕಂಪನಿಗಳ ದೌರ್ಜನ್ಯ ಮತ್ತು ಕಿರುಕುಳಕ್ಕೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದರೂ, ಗ್ರಾಮೀಣ ಭಾಗದಲ್ಲಿ ಖಾಸಗಿ ಫೈನಾನ್ಸ್‌ಗಳ ಹಾವಳಿ ಮಾತ್ರ ನಿಂತಿಲ್ಲ. ಸಾಲದ ಕಂತು ತಡವಾಗಿದೆ ಎಂಬ ಒಂದೇ ಕಾರಣಕ್ಕೆ ವೃದ್ಧೆಯೊಬ್ಬರ ಮನೆಗೆ ಕಾನೂನುಬಾಹಿರವಾಗಿ ಬೀಗ ಜಡಿದು, ಇಡೀ ಕುಟುಂಬವನ್ನೇ ಬೀದಿಗೆ ತಳ್ಳಿರುವ ಅಮಾನವೀಯ ಘಟನೆ ನಂಜನಗೂಡು ತಾಲೂಕಿನ ಕಾಟೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನ್ಯಾಯ ಸಿಗದಿದ್ದರೆ ವಿಷ ಸೇವಿಸುವುದಾಗಿ ನೊಂದ ಕುಟುಂಬ ತಹಸೀಲ್ದಾರ್‌ಗೆ ಎಚ್ಚರಿಕೆ ನೀಡಿದೆ. ನಂಜನಗೂಡು ತಾಲೂಕು…
ಮಂಡ್ಯ: ಒಂಟಿ ಮಹಿಳೆಯ ಅಕ್ರಮ ಸಂಬಂಧ ಹಾಗೂ ಮದುವೆಯಾಗುವಂತೆ ಒತ್ತಾಯಿಸಿದ ಒಂದೇ ಕಾರಣಕ್ಕೆ ಆಕೆಯನ್ನು ಭೀಕರವಾಗಿ ಕೊಲೆ ಮಾಡಿ, ಶವ ಸುಟ್ಟು ಹಾಕಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಸಿಕ್ಕಿಬೀಳುವ ಭಯದಿಂದ ಹಂತಕ ಪ್ರಿಯಕರ ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ದುರಂತ ಪ್ರಕರಣ ನಡೆದಿದೆ. ಮೃತ ದುರ್ದೈವಿಯನ್ನು ಬೆಂಗಳೂರಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ನಳಿನಿ ಎಂದು ಗುರುತಿಸಲಾಗಿದೆ. ಗಂಡನಿಂದ ದೂರವಾಗಿ ಒಂಟಿಯಾಗಿ…