ಕಾರವಾರ: ತಾಲೂಕಿನ ಕಡವಾಡ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ, ಸುಮಾರು ಆರು ದಶಕಗಳ ಸುದೀರ್ಘ ಇತಿಹಾಸ ಹೊಂದಿದ್ದ ಹಳೆಯ ಸೇತುವೆಯೊಂದು ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಧರಾಶಾಹಿಯಾಗಿದೆ. ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಸೇತುವೆಯ ಮೇಲೆ ಯಾರೂ ಇಲ್ಲದ ಕಾರಣ ಒಂದು ದೊಡ್ಡ ದುರಂತ ತಪ್ಪಿದಂತಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ದುರ್ಬಲಗೊಂಡಿದ್ದ ಈ ಹಳೆಯ ಸೇತುವೆ, ಗಾಳಿಯ ರಭಸಕ್ಕೆ ತಡೆಯಲಾರದೆ ಎರಡು-ಮೂರು ತುಂಡುಗಳಾಗಿ…
ಕಾರವಾರ: ಜಿಲ್ಲೆಯಲ್ಲಿ ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಭರ್ಜರಿ ಯಶಸ್ಸು ಗಳಿಸಿದ್ದಾರೆ. ದೂರು ದಾಖಲಾದ ಕೇವಲ 24 ಗಂಟೆಗಳ ಒಳಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಲ್ಲದೆ ಲಕ್ಷಾಂತರ ರೂಪಾಯಿ ಮೌಲ್ಯದ ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕಾರವಾರದ ಗಿಂಡಿವಾಡ ಮೂಲದ ವಿನಯ ಅಲಿಯಾಸ್ ವಿನಾಯಕ ದಯಾನಂದ ಗಾಂವ್ಕರ್ (40) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯಿಂದ ಅಂದಾಜು 87,000 ರೂ….