ಮೈಸೂರು: ಮೈಸೂರು ನಗರ ಪೊಲೀಸ್ ಘಟಕವು ಕಳ್ಳರು ಹಾಗೂ ವಂಚಕರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕಳೆದ ಮೂರೇ ತಿಂಗಳಲ್ಲಿ ಬರೋಬ್ಬರಿ 2.09 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಜಾಲಕ್ಕೆ ಸಂಬಂಧಿಸಿದಂತೆ ಒಟ್ಟು 55 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ (ಸಿಪಿ) ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಗಳ ಸಂಪೂರ್ಣ ವಿವರವನ್ನು ಹಂಚಿಕೊಂಡರು. ಪೊಲೀಸರು…
ಮೈಸೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂದಾಜು 1.60 ಕೋಟಿ ರೂಪಾಯಿ ಮೌಲ್ಯದ 280 ಕೆ.ಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಮದ್ ಜುಬೇರ್, ಮುದಾಸಿರ್ ಅಹಮದ್, ಅಬೂಬಕರ್ ಸಿದ್ದಿಕ್ ಹಾಗೂ ಸೈಯದ್ ಮಜಾರ್ ಬಂಧಿತ ಆರೋಪಿಗಳಾಗಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಸಮರ ಸಾರಿರುವ ಸಿಸಿಬಿ ಪೊಲೀಸರಿಗೆ, ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟವಾಗುತ್ತಿರುವ ಬಗ್ಗೆ…