ಬೆಂಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದೇ ಕರೆಯಲ್ಪಡುವ ಮಾಧ್ಯಮರಂಗದಲ್ಲಿ ಅಹರ್ನಿಶಿ ದುಡಿಯುವ ಪತ್ರಕರ್ತರ ಬದುಕು ಇಂದು ಅತ್ಯಂತ ಅಸುರಕ್ಷಿತವಾಗಿದೆ. ವಿಶೇಷವಾಗಿ ಗ್ರಾಮೀಣ ಮತ್ತು ಜಿಲ್ಲಾ ಮಟ್ಟದ ಪತ್ರಕರ್ತರು ಕನಿಷ್ಠ ವೇತನ, ಆರೋಗ್ಯ ಸುರಕ್ಷೆ ಹಾಗೂ ಸಾಮಾಜಿಕ ಭದ್ರತೆಯಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪತ್ರಕರ್ತರಿಗೆ ಸರಕಾರದಿಂದ ಸಿಗಬೇಕಾದ ಮೂಲಭೂತ ಸೌಕರ್ಯಗಳನ್ನು ಕಾನೂನು ಹೋರಾಟದ ಮೂಲಕ ಪಡೆದುಕೊಳ್ಳಲು ಕರ್ನಾಟಕ ರಾಜ್ಯ ವೃತ್ತಿನಿರತ ಪತ್ರಕರ್ತರ ಸಂಘವು ಬಲಿಷ್ಠ ನೀಲನಕ್ಷೆಯೊಂದನ್ನು ಸಿದ್ಧಪಡಿಸಿದೆ. ಕೇವಲ ಪ್ರತಿಭಟನೆಗಳಿಗೆ ಸೀಮಿತವಾಗದೆ, ನ್ಯಾಯಾಲಯದ ಮೂಲಕ ಸರಕಾರವನ್ನು…
ಹೊಸಕೋಟೆ: ಸಾರ್ವಜನಿಕರ ಸುರಕ್ಷತೆ ಹಾಗೂ ಪಟ್ಟಣದಲ್ಲಿ ಸುಗಮ ಸಂಚಾರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೊಸಕೋಟೆ ಸಂಚಾರ ಪೊಲೀಸ್ ಠಾಣೆಯು ವಿಶೇಷ ಜಾಗೃತಿ ಪ್ರಕಟಣೆಯೊಂದನ್ನು ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪೊಲೀಸರು ಕಡಕ್ ಸೂಚನೆ ನೀಡಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ದಂಡದ ಎಚ್ಚರಿಕೆ ನೀಡಿದ್ದಾರೆ. ಮುಖ್ಯವಾಗಿ ಸಾರ್ವಜನಿಕರ ಗಮನಕ್ಕೆ ತರಲಾದ ನಿಯಮ ಹೆಲ್ಮೆಟ್ ರಹಿತ ಚಾಲನೆಗೆ ₹೫೦೦ ದಂಡ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೆ ಬೈಕ್…