ಕೊಡಗು ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಮನೆಯ ಸುತ್ತಮುತ್ತ ಹೂಕುಂಡ, ಟೈರು ಹಾಗೂ ತೆಂಗಿನ ಚಿಪ್ಪುಗಳಲ್ಲಿ ನೀರು ನಿಲ್ಲದಂತೆ ಸಾರ್ವಜನಿಕರು ಗಮನ ಹರಿಸಬೇಕು. ಜಿಲ್ಲೆಯಲ್ಲಿ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿ, ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಿ…
ಪ್ರಸ್ತುತ ಸೋಷಿಯಲ್ ಮೀಡಿಯಾ ಯುಗದಲ್ಲಿ ಕೇವಲ ಸೌಂಡ್ ಮತ್ತು ಸೆನ್ಸೇಷನಲ್ ಸುದ್ದಿಗಳ ಬೆನ್ನಟ್ಟುವ ಮಾಧ್ಯಮಗಳ ನಡುವೆ, ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಡಿಜಿಟಲ್ ಮಾಧ್ಯಮದ ಮೂಲಕ ಜಗತ್ತಿನಾದ್ಯಂತ ಪಸರಿಸುತ್ತಿರುವ ಹೆಮ್ಮೆಯ ಯೂಟ್ಯೂಬ್ ಚಾನೆಲ್ ಹಾಗೂ ಸಾಂಸ್ಕೃತಿಕ ವೇದಿಕೆ ‘ಇದು ನಿಮ್ಮ ವಾಹಿನಿ’ (Idhu Nimma Vahini) ಅತ್ಯಂತ ವಿಶಿಷ್ಟವಾಗಿ ಮೂಡಿಬಂದಿದೆ. ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹಾಗೂ ಕಲಾರಸಿಕರ ಮನಗೆಲ್ಲುವ ಗುಣಮಟ್ಟದ ಕಂಟೆಂಟ್ ನೀಡುವ ಮೂಲಕ ಈ ಚಾನೆಲ್ ಇಂದು ಕನ್ನಡಿಗರ ನೆಚ್ಚಿನ ಡಿಜಿಟಲ್ ಕನ್ನಡಿಯಾಗಿ…