ಹುಕ್ಕೇರಿ / ಬೆಳಗಾವಿ: ಸಾರ್ವಜನಿಕ ರಸ್ತೆಯಲ್ಲಿ ಅತಿವೇಗ ಹಾಗೂ ನಿಷ್ಕಾಳಜಿತನದಿಂದ ಬೈಕ್ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ನಾಲ್ವರು ಯುವಕರನ್ನು ಬಂಧಿಸಿ, ಅವರ 4 ಯಮಹಾ ಮೋಟಾರ್ ಸೈಕಲ್‌ಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ದಿನಾಂಕ 02-09-2026 ರಂದು ಮುಂಜಾನೆ 11 ಗಂಟೆಯ ಸುಮಾರಿಗೆ ಬೆಲ್ಲದ ಬಾಗೇವಾಡಿ ಗ್ರಾಮದ ಬಸ್ ನಿಲ್ದಾಣದ ಹತ್ತಿರದ ಸಾರ್ವಜನಿಕ ರಸ್ತೆಯಲ್ಲಿ ನಾಲ್ವರು ಯುವಕರು ತಮ್ಮ ಯಮಹಾ ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ, ಮಾನವ…
ತುಮಕೂರು: ಜಿಲ್ಲೆಯಾದ್ಯಂತ ಇಂದು ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (APC) ನೇಮಕಾತಿ ಪರೀಕ್ಷೆ-2026 ಅತ್ಯಂತ ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಯಿತು. ಕಟ್ಟುನಿಟ್ಟಿನ ತಪಾಸಣೆ ಹಾಗೂ ಭದ್ರತೆ: ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ನಕಲಿ ಚಟುವಟಿಕೆಗಳು ನಡೆಯದಂತೆ ತಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಅಶೋಕ್ ವೆಂಕಟ್, ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (Addl…