ಗೋಬಿಚೆಟ್ಟಿಪಾಳ್ಯಂ (ತಮಿಳುನಾಡು): ದಿನಾಲೂ ಕುಡಿದು ಬಂದು ಪತ್ನಿಗೆ ದೈಹಿಕ ಹಾಗೂ ಮಾನಸಿಕವಾಗಿ ಕ್ರೂರ ಹಿಂಸೆ ನೀಡುತ್ತಿದ್ದ ಗಂಡನನ್ನು ಹೆಂಡತಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ, ಬಳಿಕ ಆತನ ಗುಪ್ತಾಂಗವನ್ನೇ ಕತ್ತರಿಸಿ ಚರಂಡಿಗೆ ಎಸೆದಿರುವ ಘೋರ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಬಿಚೆಟ್ಟಿಪಾಳ್ಯಂ ಬಳಿಯ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಕೊಲೆಯಾದ ವ್ಯಕ್ತಿಯನ್ನು ತಂಗರಾಜ್ ಎಂದು ಗುರುತಿಸಲಾಗಿದೆ. ಈತನಿಗೆ ಕೆಲವು ವರ್ಷಗಳ ಹಿಂದೆ ಅಮುದಾ ಎಂಬಾಕೆಯೊಂದಿಗೆ ಪ್ರೇಮ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ….
ದಶಕಗಳ ಕಾಲ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ, ಕಾಡುಗಳ್ಳ ಹಾಗೂ ದಂತಚೋರ ವೀರಪ್ಪನ್‌ನನ್ನು ಮಟ್ಟಹಾಕಿದ ‘ಆಪರೇಷನ್ ಕೊಕೂನ್’ (Operation Cocoon) ಎನ್‌ಕೌಂಟರ್‌ನ ರೂವಾರಿ, ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಕೆ. ವಿಜಯ್ ಕುಮಾರ್ ಅವರಿಗೆ ಕೇಂದ್ರ ಸರ್ಕಾರವು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ‘ಪದ್ಮಶ್ರೀ’ ಪ್ರಶಸ್ತಿಯನ್ನು ಘೋಷಿಸಿದೆ. ಮೇ 25 ರಂದು ನವದೆಹಲಿಯಲ್ಲಿ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ವಿಜಯ್ ಕುಮಾರ್ ಅವರಿಗೆ ಈ…