ದೇಶದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ತಿಳಿಯಾಗುತ್ತಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್‌ಗಳ ಸರಬರಾಜಿನ ಮೇಲಿದ್ದ ಎಲ್ಲಾ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಹಿಂಪಡೆಯಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಗ್ಯಾಸ್ ಪೂರೈಕೆ ಸರಪಳಿ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಇಂದು…
ಮೈಸೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ಅವರು ತಿಳಿಸಿದರು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್ ಪಾರ್ಕ್ ವರೆಗೆ…