ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬೋಧಕರ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿರುವ ಸರ್ಕಾರ, ಜೂನ್ ತಿಂಗಳಿನಲ್ಲೇ ಬರೋಬ್ಬರಿ 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಶಾಲಾ ಶಿಕ್ಷಣ ಮತ್ತು…
ಕುಶಾಲನಗರ: ಮಡಿಕೇರಿ ಸೇರಿದಂತೆ ವಿವಿಧ ತಾಲ್ಲೂಕುಗಳ ಕುಡಿಯುವ ನೀರಿನ ಅಗತ್ಯತೆಗಾಗಿ ಮೇ 9 ರಿಂದ ಮೇ 13 ರವರೆಗೆ ಹಾರಂಗಿ ಜಲಾಶಯದಿಂದ ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ನಿವಾಸಿಗಳು ಜಾಗರೂಕರಾಗಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಹಾರಂಗಿ ಜಲಾಶಯ ಕುಡಿಯುವ ನೀರಿನ ಸಮಿತಿ ಸಭೆಯ ತೀರ್ಮಾನದಂತೆ ಈ ಆದೇಶ ಹೊರಡಿಸಲಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಾರಂಗಿ ಜಲಾಶಯ ಯೋಜನೆಯ ನೀರಾವರಿ ಸಲಹಾ…