ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರಿಗೆ ವಸತಿ ಸೌಲಭ್ಯ ಕಲ್ಪಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಸಾಕಷ್ಟು ಕಾಲಾವಕಾಶ ನೀಡಿದರೂ ಹಲವು ಹೋಂ-ಸ್ಟೇಗಳು ಇನ್ನು ನೋಂದಣಿಯಾಗದಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರ ಅಡಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಡೆಸುವ ಪ್ರತಿಯೊಬ್ಬರೂ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಸೂಚಿಸಲಾಗಿದೆ. ಈಗಾಗಲೇ ನಿಯಮ…