ಚಿಕ್ಕಮಗಳೂರು: ಹೊಸ ಲೇಔಟ್‌ನಲ್ಲಿ ಟ್ರಾನ್ಸ್‌ಫಾರ್ಮರ್ (ಟಿ.ಸಿ) ನಿರ್ಮಾಣಕ್ಕೆ ಅನುಮತಿ ನೀಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು (ಎಇಇ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೆಸ್ಕಾಂ ಕಚೇರಿಯ ಎಇಇ ತಿರುಪತಿ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಯಾಗಿದ್ದಾರೆ. ಸ್ಥಳೀಯ ನಿವಾಸಿ ಲೋಕೇಶ್ ಎಂಬುವವರು ಹೊಸದಾಗಿ ನಿರ್ಮಿಸುತ್ತಿರುವ ಲೇಔಟ್‌ಗೆ ಟಿ.ಸಿ ಅಳವಡಿಸಲು ಅನುಮತಿ ಕೋರಿ ಮೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಎಇಇ ತಿರುಪತಿ…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆಯೊಂದರ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ನಗದು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂತೇಮರಹಳ್ಳಿ ಸಿಪಿಐ ಸಾಗರ್ ಅವರ ನೇತೃತ್ವದ ಪೊಲೀಸ್ ತಂಡ ಈ ಮಿಂಚಿನ ಕಾರ್ಯಾಚರಣೆ ಕೈಗೊಂಡಿದೆ. ಖಚಿತ ಮಾಹಿತಿ ಮೇರೆಗೆ ಜೂಜಾಟದ ಜಾಗಕ್ಕೆ ಲಗ್ಗೆ ಇಟ್ಟ ಪೊಲೀಸ್ ತಂಡ, ಅಡ್ಡೆಯಲ್ಲಿದ್ದ ಏಳು ಮಂದಿ ಜೂಜುಕೋರರನ್ನು ಜಾಗದಲ್ಲೇ ವಶಕ್ಕೆ ಪಡೆದಿದೆ. ದಾಳಿಯ…