ಬೆಂಗಳೂರು: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ರಾಜ್ಯ ಸರ್ಕಾರದ ಸಚಿವ ಡಿ. ಸುಧಾಕರ್ (63) ಅವರು ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಬೆಳಗಿನ ಜಾವ 3.15ಕ್ಕೆ ಕೊನೆಯುಸಿರೆಳೆದಿದ್ದಾರೆ. ಕೆಲವು ದಿನಗಳ ಹಿಂದೆ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಡಿ ಚಿಪ್ಪಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸುಧಾಕರ್ ಅವರಿಗೆ, ಆಪರೇಷನ್ ನಂತರ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಧೂಮಪಾನದ…
ರಾಮದುರ್ಗ: ಪ್ರಿಯಕರನ ಜೊತೆ ಸೇರಿ ಜೀವನ ನಡೆಸಲು ಸ್ವಂತ ಪತಿಯ ಮನೆಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಕೇವಲ 48 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಬಂಧಿತರನ್ನು ಹಸೀನಾ ನದಾಫ್ ಹಾಗೂ ಆಕೆಯ ಪ್ರಿಯಕರ ಹಣಮಂತ ಮಾರಾಪೂರ ಎಂದು ಗುರುತಿಸಲಾಗಿದೆ. ಮೂಲತಃ ಮೂಡಲಗಿ ತಾಲೂಕಿನವಳಾದ ಹಸೀನಾ ನದಾಫ್‌ಗೆ ಕಳೆದ ಎರಡು…