ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಒಂದೇ ಸ್ಕೂಟರ್‌ನಲ್ಲಿ ಆರು ಮಂದಿ ಅಪ್ರಾಪ್ತ ಬಾಲಕರು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಪಾದರಾಯನಪುರ ಮುಖ್ಯರಸ್ತೆಯ ಗೌರಿಪಾಳ್ಯ ಬಳಿ ಇರುವ ಆಟೋ ಗ್ಯಾಸ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಏಪ್ರಿಲ್ 26ರಂದು ಬೆಳಿಗ್ಗೆ ಸುಮಾರು 10:45ರ ವೇಳೆಗೆ KA05-JZ-9065 ನೋಂದಣಿ ಸಂಖ್ಯೆಯ ಸ್ಕೂಟರ್‌ನಲ್ಲಿ…
ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವಿನ ವೈಷಮ್ಯ ವಿಕೋಪಕ್ಕೆ ಹೋಗಿದ್ದು, ತಮಿಳುನಾಡಿನಿಂದ ಸ್ನೇಹಿತರನ್ನು ಕರೆಸಿ ಹಲ್ಲೆ ಮಾಡಿಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಮಾಡಲು ಬಂದು ಹಣ ಮತ್ತು ವಸ್ತುಗಳನ್ನು ಕಿತ್ತುಕೊಂಡಿದ್ದರಿಂದ ಆರೋಪಿಗಳ ಮೇಲೆ ಡಕಾಯಿತಿ ಪ್ರಕರಣ ದಾಖಲಾಗಿದೆ. ಅಭಿನೇಶ್, ಕಲೈ ವೆಂದನ್, ವಿಮಲ್ ರಾಜ್, ಕುಮಾರನ್, ಪ್ರೇಮ್ ಕುಮಾರ್ ಹಾಗೂ ನವೀನ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಲ್ಲಿ ಅಭಿನೇಶ್ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಮೆಕ್ಯಾನಿಕಲ್…