ಹೊಸದಿಲ್ಲಿ: ಯುಪಿಐ (UPI) ವಹಿವಾಟುಗಳ ಮೇಲೆ ಶೀಘ್ರದಲ್ಲೇ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಸಣ್ಣ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ. ’ಪೇಮೆಂಟ್ ಅಂಡ್ ಸೆಟಲ್ಮೆಂಟ್ ಸಿಸ್ಟಮ್ಸ್ (ತಿದ್ದುಪಡಿ) ಮಸೂದೆ, 2026′ ಹಿನ್ನೆಲೆಯಲ್ಲಿ ಯುಪಿಐ ಮೇಲೆ ‘ಮರ್ಚಂಟ್ ಡಿಸ್ಕೌಂಟ್ ರೇಟ್’ (MDR) ಶುಲ್ಕ ಜಾರಿಯಾಗಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಸ್ತುತ ಯುಪಿಐ ವಹಿವಾಟುಗಳ ಮೇಲೆ ಯಾವುದೇ…
ಬೆಂಗಳೂರು: ನಗರದಲ್ಲಿ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರ ಪತ್ತೆಗೆ ಕೈಗೊಂಡಿದ್ದ ‘ಆಪರೇಷನ್ ಮುಕ್ತ’ ವಿಶೇಷ ಕಾರ್ಯಾಚರಣೆಯಲ್ಲಿ 53 ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹಾಗೂ ವೈಟ್‌ಫೀಲ್ಡ್ ವಿಭಾಗಗಳಲ್ಲಿ ಶನಿವಾರ ನಡೆಸಿದ ಬೃಹತ್ ದಾಳಿಯಲ್ಲಿ ಅಂದಾಜು 3,000 ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ವೈಟ್‌ಫೀಲ್ಡ್ ವಿಭಾಗದ 38 ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗದ 15 ಬಾಂಗ್ಲಾದೇಶಿಯರನ್ನು ಬಂಧಿಸಿ, ನೆಲಮಂಗಲದ ಸೊಂಡೆಕೊಪ್ಪ…