ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) 70 ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಪ್ರಶಿಕ್ಷಣಾರ್ಥಿಗಳು ದಿನಾಂಕ 25.07.2026ರಂದು ಮೈಸೂರು ನಗರದ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ (Special Juvenile Police Unit – SJPU) ಅಧ್ಯಯನ ಭೇಟಿ ನೀಡಿದರು. ಈ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಸಿಸಿಬಿ ಎಸಿಪಿ (CCB ACP) ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಯವರು ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಪ್ರಮುಖ ಉದ್ದೇಶ,…
ಚಿಂತಾಮಣಿ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ಎಂಡಿಎಂಎ (MDMA) ಮಾದಕ ವಸ್ತುವಿನೊಂದಿಗೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾತ್ಮಿದಾರರಿಂದ ದೊರೆತ ಖಚಿತ ಮಾಹಿತಿ ಆಧರಿಸಿ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು, ಠಾಣಾ ಸರಹದ್ದಿನ ಕನ್ನಂಪಲ್ಲಿ ಕೆರೆಯ ಬಳಿ ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಲಾಗಿದೆ….