ಬಳ್ಳಾರಿ: ತಾಲೂಕಿನ ಯರಗುಡಿ ಗ್ರಾಮ ಪಂಚಾಯತಿಯಲ್ಲಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ – ಗ್ರಾಮೀಣ’ (VB-G RAM G) ಯೋಜನೆಯ ವ್ಯಾಪಕ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಕೆರ್ ಅವರು ಬುಧವಾರ ಅಧಿಕೃತವಾಗಿ ಚಾಲನೆ ನೀಡಿದರು. ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧಿಕಾರಿಗಳು ಯೋಜನೆಯ ಮುಖ್ಯ ಉದ್ದೇಶಗಳು, ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳು ಹಾಗೂ ಗ್ರಾಮೀಣ ಭಾಗದಲ್ಲಿ…
ದಾವಣಗೆರೆ: ಜಿಲ್ಲೆಯಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಸರ್ವಾಂಗೀಣ ಅಭಿವೃದ್ಧಿಗೆ ಕೈಗಾರಿಕೋದ್ಯಮಿಗಳು, ಕಂಪನಿಗಳು ಹಾಗೂ ದಾನಿಗಳು ತಮ್ಮ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ನಿಧಿಯನ್ನು ಬಳಸಿಕೊಂಡು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಕರೆ ನೀಡಿದ್ದಾರೆ. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಕಂಪನಿಗಳ ಮಾಲೀಕರು, ಕೈಗಾರಿಕೋದ್ಯಮಿಗಳು ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ‘ಶಾಲಾ ಶಿಕ್ಷಣದಲ್ಲಿ ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ’ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. …