ಬೆಂಗಳೂರು: “ಕರ್ನಾಟಕ ಪೊಲೀಸರು ಏನು ಮಾಡುತ್ತಾರೆ ನೋಡೋಣ” ಎಂದು ಬಹಿರಂಗವಾಗಿಯೇ ಸವಾಲು ಹಾಕಿದ್ದ ಅಂತರರಾಷ್ಟ್ರೀಯ ಡ್ರಗ್ ಜಾಲದ ಕಿಂಗ್‌ಪಿನ್ ಸೇರಿದಂತೆ ನಾಲ್ವರು ಅಪಾಯಕಾರಿ ಪೆಡ್ಲರ್‌ಗಳನ್ನು ಹೆಬ್ಬಾಳ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 34 ಕೋಟಿ ರೂಪಾಯಿ ಮೌಲ್ಯದ 17 ಕೆಜಿ 580 ಗ್ರಾಂ ತೂಕದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧರಿಸಿ ಹೆಬ್ಬಾಳ ಪೊಲೀಸರು ದೇಶದ ವಿವಿಧೆಡೆ ದಾಳಿ ನಡೆಸಿ ಈ ಕೆಳಗಿನ ನಾಲ್ವರನ್ನು ಸದ್ಯ ಜೈಲಿಗಟ್ಟಿದ್ದಾರೆ: ಸೊಲೊಮನ್ ಟಚುಕ್ಯೂ…
ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಅತ್ಯಂತ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಜೈಲು ಅಧೀಕ್ಷಕರು ಸೇರಿದಂತೆ ಒಟ್ಟು ಎಂಟು ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಜೈಲಾಧಿಕಾರಿಗಳ ಗಂಭೀರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ಕುರಿತು ‘ಪೊಲೀಸ್ ರೌಂಡಪ್’ ಸಾಕ್ಷಿ ಸಮೇತ ನಿರಂತರವಾಗಿ ಸರಣಿ ವರದಿಗಳನ್ನು ಪ್ರಸಾರ ಮಾಡಿತ್ತು. ಈ ವರದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು, ಕರ್ತವ್ಯಲೋಪ…