ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಮಂಗಳವಾರ) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಅನ್ಬುಕುಮಾರ್ ತಿಳಿಸಿದ್ದಾರೆ. ಈ ಬೃಹತ್ ಜನಾಂದೋಲನ ಪ್ರಕ್ರಿಯೆಯ ಪ್ರತಿಯೊಂದು ಮಾಹಿತಿಯೂ ಇನ್ಮುಂದೆ ಡಿಜಿಟಲ್ ರೂಪದಲ್ಲಿ ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲೇ ಲಭ್ಯವಿರಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಪ್ರಸ್ತುತ ಒಟ್ಟು 5,54,32,314 ಮತದಾರರಿದ್ದಾರೆ. ಇವರಲ್ಲಿ ಈಗಾಗಲೇ ಶೇ 91.61 ರಷ್ಟು ಮತದಾರರು ಮ್ಯಾಪಿಂಗ್‌ಗೆ ಒಳಪಟ್ಟಿದ್ದು, ಇನ್ನುಳಿದ 46,52,504 ಮತದಾರರನ್ನು ಮ್ಯಾಪಿಂಗ್ ವ್ಯಾಪ್ತಿಗೆ ತರಲು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮತ್ತಷ್ಟು ಸ್ವಚ್ಛ, ಸುಂದರ ಹಾಗೂ ಜನಸ್ನೇಹಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಬೃಹತ್ ಹೆಜ್ಜೆ ಇಡಲಾಗಿದೆ. ನಗರದಾದ್ಯಂತ ನಾಳೆಯಿಂದ (ಜುಲೈ 1) “ಕ್ಲೀನ್ ಬೆಂಗಳೂರು” ವಿಶೇಷ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕ ಸ್ಥಳಗಳ ಕಾಯಕಲ್ಪಕ್ಕೆ ಅಧಿಕಾರಿಗಳು ಸಜ್ಜಾಗಿದ್ದಾರೆ. ನಾಳೆಯಿಂದ ಆರಂಭವಾಗಿ ಜುಲೈ 15ರವರೆಗೆ ಒಟ್ಟು 15 ದಿನಗಳ ಕಾಲ ಈ ವಿಶೇಷ ಅಭಿಯಾನ ನಡೆಯಲಿದೆ. ನಗರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿರುವ ಕಸದ ರಾಶಿಗಳು, ಬ್ಲಾಕ್ ಸ್ಪಾಟ್‌ಗಳು ಹಾಗೂ ಎಲ್ಲೆಂದರಲ್ಲಿ ಬಿದ್ದಿರುವ…