ದೇಶದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ತಿಳಿಯಾಗುತ್ತಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್‌ಗಳ ಸರಬರಾಜಿನ ಮೇಲಿದ್ದ ಎಲ್ಲಾ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಹಿಂಪಡೆಯಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಗ್ಯಾಸ್ ಪೂರೈಕೆ ಸರಪಳಿ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಇಂದು…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗಳ ಮೇಲೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, 49 ಮಂದಿ ಜೂಜುಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವೇಳೆ ಜೂಜಾಟಕ್ಕೆ ಪಣವಾಗಿಟ್ಟಿದ್ದ ₹3.78 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಕೊಳ್ಳೇಗಾಲ ತಾಲೂಕಿನಾದ್ಯಂತ ಪಾರ್ಟಿ ಹಾಲ್‌ಗಳಲ್ಲಿ ಕಾನೂನುಬಾಹಿರವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಗ್ರಾಮಾಂತರ ಪೊಲೀಸರು ಮೂರು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ಸಂಘಟಿಸಿದ್ದರು. ಕೊಳ್ಳೇಗಾಲ…