ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೀದಿ ನಾಯಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ನಾಯಿ ಕಡಿತದ ಇತ್ತೀಚಿನ ಅಂಕಿ-ಅಂಶಗಳು ಸಾರ್ವಜನಿಕ ವಲಯವನ್ನು ಬೆಚ್ಚಿಬೀಳಿಸುವಂತಿವೆ. ಜನವರಿ ತಿಂಗಳಿನಿಂದ ಈವರೆಗೆ ಇಡೀ ರಾಜ್ಯದಲ್ಲಿ ಬರೋಬ್ಬರಿ 2,66,367 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ರೇಬಿಸ್ ಸೇರಿದಂತೆ ವಿವಿಧ ಭೀಕರ ಸೋಂಕಿನಿಂದಾಗಿ 30 ಜನ ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ ಎಂಬಂತೆ, ಕೇವಲ ಒಂದು ವಾರದ ಅವಧಿಯಲ್ಲೇ 13,220…
ದೊಡ್ಡಬಳ್ಳಾಪುರ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ನಿವಾಸಗಳ ಮೇಲೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ ವ್ಯಾಪಕ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಡಿವೈಎಸ್‌ಪಿ ಪಾಂಡುರಂಗ ಅವರ ಖುದ್ದು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಉಪವಿಭಾಗದ ವ್ಯಾಪ್ತಿಗೆ ಒಳಪಡುವ 45ಕ್ಕೂ ಹೆಚ್ಚು ಸಕ್ರಿಯ ರೌಡಿ ಶೀಟರ್‌ಗಳ ಮನೆಗಳನ್ನು ಏಕಕಾಲದಲ್ಲಿ ತಪಾಸಣೆಗೆ ಒಳಪಡಿಸಲಾಯಿತು. ಈ ಬೃಹತ್ ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ,…