ಬೆಂಗಳೂರು: ದಿನಬಳಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಸಾರ್ವಜನಿಕರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಗೃಹ ಬಳಕೆಯ ಎಲ್‌ಪಿಜಿ (Domestic LPG) ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 29 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳ ಅಂತರದಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದ್ದು, ಮಧ್ಯಮ ಮತ್ತು ಬಡ ವರ್ಗದ ಕುಟುಂಬಗಳ ಮಾಸಿಕ ಬಜೆಟ್ ಮೇಲೆ ಭಾರಿ ಹೊರೆ ಬೀಳಲಿದೆ. ಸ್ಥಳೀಯ ತೆರಿಗೆ ಮತ್ತು ಸಾಗಾಣಿಕೆ ವೆಚ್ಚಗಳ…
ನವದೆಹಲಿ: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ NEET-UG ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ಭಾರತದ ಅತಿದೊಡ್ಡ ‘ಜೆನ್ ಝಿ’ (Gen Z) ಯುವ ಸಮೂಹದ ಪ್ರತಿಭಟನೆ ರಾಜಧಾನಿಯಲ್ಲಿ ಭುಗಿಲೆದ್ದಿದೆ. ಅಮೆರಿಕಾದಿಂದ ಭಾರತಕ್ಕೆ ಬಂದಿಳಿದಿರುವ ಇಂಟರ್ನೆಟ್ ಸೆನ್ಸೇಷನ್, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜಿತ್ ಧೀಪ್ಕೇ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಧರಣಿ ಆರಂಭವಾಗಿದೆ. ಕೇವಲ ಆನ್‌ಲೈನ್ ಮೀಮ್ ಆಗಿ ಆರಂಭಗೊಂಡು, ಈಗ ಬೃಹತ್ ರಾಜಕೀಯ ಆಂದೋಲನವಾಗಿ ರೂಪಾಂತರಗೊಂಡಿರುವ…