ತಾಂಡವಪುರ (ಜೂನ್ 5): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ನೇಮಕಗೊಂಡಿರುವ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು, ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ದಲಿತ ಮುಖಂಡ ಹೆಚ್ಚಿಗೆ ಇಂದನ್ ಬಾಬು ಮತ್ತು ಅವರ ತಂಡದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, “ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ಅದರಲ್ಲೂ…
ಸಿದ್ದಾಪುರ: ತಾಲೂಕಿನ ಮಾವಿನಗುಂಡಿ ಶಾಖೆಯ ಹಲಗೇರಿ ಸಮೀಪ ಕಡವೆ ಮತ್ತು ಬರ್ಕ ಪ್ರಾಣಿಗಳನ್ನು ಬೇಟೆಯಾಡಿ ವಾಹನದಲ್ಲಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹುಸೂರು ಗ್ರಾಮದ ಸಮೀಪದ ಕಚ್ಚಾರಸ್ತೆಯಲ್ಲಿ ಮೃತಪಟ್ಟ ಹೆಣ್ಣು ಕಡವೆ ಹಾಗೂ ಒಂದು ಗಂಡು ಬರ್ಕವನ್ನು ಅಕ್ರಮವಾಗಿ ಸಾಗಿಸುತ್ತಿರುವುದನ್ನು ಖಚಿತಪಡಿಸಿಕೊಂಡ ಅರಣ್ಯ ಇಲಾಖೆ ತಂಡವು ದಾಳಿ ನಡೆಸಿದೆ. ಬಂಧಿತ ಆರೋಪಿಗಳನ್ನು ಹುಸೂರಿನ ವಿರೇಂದ್ರ ಮಾರುತಿ ನಾಯ್ಕ, ಕುಂಬಾರಕುಳಿಯ ಶಿವಾನಂದ ಮಹಾಬಲೇಶ್ವರ ನಾಯ್ಕ ಹಾಗೂ ಸುಂಕತ್ತಿಯ…