ಮೈಸೂರು: ಮಹಾರಾಷ್ಟ್ರ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನೀಡಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮೈಸೂರು ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ದಂಧೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 3 ಆನೆ ದಂತದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈಸೂರಿನ ರಾಮಕೃಷ್ಣನಗರದ ‘ಐ’ ಬ್ಲಾಕ್‌ನ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿ ಕೆಲವರು ಕಾನೂನುಬಾಹಿರವಾಗಿ ಆನೆ ದಂತಗಳನ್ನು ಮಾರಾಟ ಮಾಡಲು ಸಂಚು…
ಮೈಸೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ಅವರು ತಿಳಿಸಿದರು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್ ಪಾರ್ಕ್ ವರೆಗೆ…