ಭಟ್ಕಳ: ತಾಲೂಕಿನ ತಟ್ಟೆಹಕ್ಕಲ ಹೊಳೆಯಲ್ಲಿ ಚಿಪ್ಪಿಕಲ್ಲು (ಕಪ್ಪೆಚಿಪ್ಪು) ಆರಿಸಲು ಹೋಗಿ ಸಂಭವಿಸಿದ ಭೀಕರ ಜಲ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 11ಕ್ಕೆ ಏರಿಕೆಯಾಗಿದೆ. ಭಾನುವಾರ ನಡೆದ ಘಟನೆಯಲ್ಲಿ ನಾಪತ್ತೆಯಾಗಿದ್ದ ಮಾದೇವ ಜಟ್ಟಪ್ಪ ನಾಯ್ಕ ಅವರ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಘಟನೆ ನಡೆದ ದಿನದಿಂದಲೇ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಸಿಬ್ಬಂದಿ, ಸೋಮವಾರ ಮುಂಜಾನೆಯಿಂದಲೇ ತೀವ್ರ ಶೋಧ ಕಾರ್ಯ ನಡೆಸಿ ಮಾದೇವ ನಾಯ್ಕ ಅವರ ಶವವನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪತ್ತೆಯಾದ…
ಹೈದರಾಬಾದ್: ರಸ್ತೆಯಲ್ಲಿ ಮಗುವಿನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಜೊತೆ ಅತ್ಯಂತ ನೀಚವಾಗಿ ನಡೆದುಕೊಂಡು, ವಿಕೃತಿ ಮೆರೆದಿದ್ದ ಆರೋಪಿಯನ್ನು ಹೈದರಾಬಾದ್‌ನ ನಾರ್ಸಿಂಗಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಸಿಸಿಟಿವಿ (CCTV) ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಂಡಿಪೇಟ್ ಪುಪ್ಪಲಗೂಡ ನಿವಾಸಿಯಾದ ವಡ್ಡೆ ನಾಗರಾಜು ಎಂಬಾತನನ್ನು ಕಟಕಟೆಗೆ ತಳ್ಳಿದ್ದಾರೆ. ಮೇ 14 ರಂದು ಹೈದರಾಬಾದ್‌ನ ಮಣಿಕೊಂಡ ಪ್ರದೇಶದ ಅಲ್ಕಾಪುರ್ ಟೌನ್‌ಶಿಪ್ ಬಳಿ ಈ ಆಘಾತಕಾರಿ ಘಟನೆ ನಡೆದಿತ್ತು. ಮಹಿಳೆಯೊಬ್ಬರು…