ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಕಂದಾಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಮೃತದೇಹವನ್ನು ರಸ್ತೆ ಮಧ್ಯದಲ್ಲೇ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಅರದೇಶನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ತೀವ್ರ ನೂಕಾಟ-ತಳ್ಳಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವರದಿಗಳ ಪ್ರಕಾರ, ಅರದೇಶನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಸುಮಾರು 4 ಗುಂಟೆ ಸರ್ಕಾರಿ ಜಾಗವನ್ನು ಕಳೆದ…
ಹುಬ್ಬಳ್ಳಿ: ಬದುಕು ಯಾವಾಗ, ಯಾರನ್ನು, ಹೇಗೆ ಪರೀಕ್ಷಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವಿಧಿಯ ಆಟದ ಮುಂದೆ ಅದೆಷ್ಟೋ ಕನಸುಗಳು ನುಚ್ಚುನೂರಾಗುತ್ತವೆ. ಇದಕ್ಕೆ ತಾಜಾ ಉದಾಹರಣೆ ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (M.Sc Mathematics) ಪಡೆದು, ಚಿನ್ನದ ಪದಕ (Gold Medalist) ಮುಡಿಗೇರಿಸಿಕೊಂಡಿದ್ದ ಸುಪ್ರಿತಾ ಅವರ ಜೀವನ. ವಿವಾಹವಾದ ಕೆಲವೇ ದಿನಗಳಲ್ಲಿ ಪತಿಯನ್ನು ಕಳೆದುಕೊಂಡು ಕತ್ತಲಲ್ಲಿ ನಿಂತಿದ್ದ ಹೆಣ್ಣುಮಗಳು, ಇಂದು ಯಾರ ಮುಂದೆಯೂ ಕೈಚಾಚದೆ ಹುಬ್ಬಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಡೆಲಿವರಿ ಗರ್ಲ್ ಆಗಿ ಕಾರ್ಯನಿರ್ವಹಿಸುತ್ತಾ ಯುವ ಪೀಳಿಗೆಗೆ ರೋಲ್ ಮಾಡೆಲ್…