ಸಾರಿಗೆ ಸಂಸ್ಥೆಯ ಚಾಲನಾ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗಾಗಿ ವಿಶೇಷ ಜಾಗೃತಿ ಹಾಗೂ ಮಾರ್ಗದರ್ಶನ ಸಭೆಯನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಕಾರ್ಯಕ್ಷಮತೆ ಹೆಚ್ಚಳ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆಯಿತು. ಸಭೆಯಲ್ಲಿ ಅಧಿಕಾರಿಗಳು ಇಂಧನ ಕ್ಷಮತೆ (KMPL) ಮತ್ತು ಪ್ರತಿ ಕಿಲೋಮೀಟರ್ ಆದಾಯ (EPKM) ಹೆಚ್ಚಿಸುವ ಕುರಿತು ಸಿಬ್ಬಂದಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಸಂಸ್ಥೆಯ ಆರ್ಥಿಕ ಪ್ರಗತಿಯಲ್ಲಿ ಇಂಧನ ಉಳಿತಾಯ ಮತ್ತು ಆದಾಯ ಹೆಚ್ಚಳದ ಪಾತ್ರವನ್ನು ವಿವರಿಸಲಾಯಿತು. ಜೊತೆಗೆ, ರಸ್ತೆ ಅಪಘಾತಗಳಿಂದಾಗುವ ದುಷ್ಪರಿಣಾಮಗಳು,…
ರಾಯಚೂರು: ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರಿಗಾಗಿ ‘ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ’ ಕಾರ್ಯಕ್ರಮವನ್ನು ನಗರದ ಮೈತ್ರಿ ಸಮುದಾಯ ಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಗರದ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರು, ಸಾಂಕ್ರಾಮಿಕ ರೋಗಗಳು ಹರಡುವ ವಿಧಾನ, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಕುರಿತು ವಿವರವಾದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿ ಕರ್ತವ್ಯದ ನಡುವೆ ತಮ್ಮ…