ಕಲಬುರಗಿ/ಬೀದರ್: ಕಲಬುರಗಿ ಕೇಂದ್ರ ಕಾರಾಗೃಹದ ಗೋಡೆ ಹಾರಿ ಮೂವರು ಕೈದಿಗಳು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸಾಗರ್ ಎಂದು ಗುರುತಿಸಲಾಗಿದೆ. ಈತ ಜೈಲಿನಿಂದ ತಪ್ಪಿಸಿಕೊಂಡ ದಿನದಿಂದ ಬೀದರ್ ಹಾಗೂ ಭಾಲ್ಕಿ ಭಾಗದ ಜಮೀನುಗಳಲ್ಲಿ ಅಡಗಿಕುಳಿತು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ. ಬೀದರ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಸಜಾ ಕೈದಿಯಾಗಿದ್ದ ಸಾಗರ್, ಇದೇ ವರ್ಷದ ಫೆಬ್ರವರಿ ತಿಂಗಳಲ್ಲಿ…
ಧಾರವಾಡ (ಅಣ್ಣಿಗೇರಿ) : ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದು ಬಿದ್ದಿರುವ ಘಟನೆ ಅಣ್ಣಿಗೇರಿಯ ಉದಯನಗರದಲ್ಲಿ ನಡೆದಿದೆ. ಉದಯನಗರದ ನಿವಾಸಿ ಮೊಹಮ್ಮದ್ ಅಲಿ ಧಾರವಾಡ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಾನುವಾರ ಕುಟುಂಬಸ್ಥರೆಲ್ಲರೂ ಮನೆಯಲ್ಲಿದ್ದ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಮನೆಯ ಗೋಡೆ…