ಚಿತ್ರದುರ್ಗ: ಇಂದಿನ ಯುವ ಪೀಳಿಗೆ ಮಾದಕ ದ್ರವ್ಯಗಳ ದಾಸರಾಗದೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಕಾನೂನುಬಾಹಿರವಾಗಿದ್ದು, ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು (SP) ಎಚ್ಚರಿಕೆ ನೀಡಿದರು. ನಗರದ ಎಕ್ಸ್‌ಪರ್ಟ್ ಪಿ.ಯು. ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಮಾನ್ಯ ಪೊಲೀಸ್ ಅಧೀಕ್ಷಕರು, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ…
ಬೆಂಗಳೂರು: ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಸಿ.ಕೆ. ಅಚ್ಚುಕಟ್ಟು (ಚನ್ನಮ್ಮನಕೆರೆ ಅಚ್ಚುಕಟ್ಟು) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಅಸ್ಸಾಂ ಮೂಲದ ದಂಪತಿಗಳಾದ ಸ್ವಪ್ನ (28) ಮತ್ತು ಮನೋಜ್ (28) ಎಂದು ಗುರುತಿಸಲಾಗಿದೆ. ಈ ದಂಪತಿಗೆ ಮೂರು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಪತಿ ಮನೋಜ್ ಬೆಂಗಳೂರಿನಲ್ಲಿ ಕಾರ್ಪೆಂಟರ್ (ಬಡಗಿ) ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ. …