ದಾವಣಗೆರೆ: ನಗರದ ಫಿಟ್‌ನೆಸ್ ಕ್ಲಬ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ದೂರುಗಳು ಹಾಗೂ ಮಾಹಿತಿ ಕೇಳಿಬಂದ ಹಿನ್ನೆಲೆಯಲ್ಲಿ, ಗೃಹಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೇಖರ್ ಹೆಚ್. ತೆಕ್ಕಣ್ಣವರ್ ಅವರೊಂದಿಗೆ ತುರ್ತು ಸಭೆ ನಡೆಸಿ, ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಮಹತ್ವದ ಸೂಚನೆ ನೀಡಲಾಗಿದೆ. ಮಹಿಳೆಯರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ತರಲು ಆದೇಶಿಸಲಾಗಿದೆ. ಸಿಸಿಟಿವಿ…
ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತವರು ಮನೆಯಲ್ಲಿದ್ದ ಪತ್ನಿಯನ್ನು ವಾಪಸ್ ಕರೆತರಲು ಹೋದ ಪತಿಯ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಾಬುಸಾಬ್ ಜಮಾದಾರ್ (35) ಕೊಲೆಯಾದ ದುರ್ದೈವಿ ಪತಿ. ಗಲಾಟೆ ವೇಳೆ ತಡೆಯಲು ಬಂದ ಇವರ ಸ್ನೇಹಿತ ಅಪ್ಪಾಲಾಲ ಮಕಾಸಿ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಬಾಬುಸಾಬ್ ಜಮಾದಾರ್ ಐದು…