ಬೆಂಗಳೂರು: ರಾಜಧಾನಿಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬರೋಬ್ಬರಿ 12 ಕೋಟಿ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಗಿರಿನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ನೈಜೀರಿಯಾ ಪ್ರಜೆ ಚಿಗ್ಬಂಡು ನ್ವಾಂಕಪ ಎಂದು ಗುರುತಿಸಲಾಗಿದೆ. ಬಂಧಿತನಿಂದ 5 ಕೆ.ಜಿ ತೂಕದ ಎಂಡಿಎಂಎ (MDMA) ಕ್ರಿಸ್ಟಲ್ ಹಾಗೂ 1,000 ಎಕ್ಸ್‌ಟಸಿ (Ecstasy) ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು…
ದೇಶವನ್ನೇ ಬೆಚ್ಚಿಬೀಳಿಸಿದ್ದ ಆರು ಜನರ ಭೀಕರ ಹತ್ಯಾಕಾಂಡ ಪ್ರಕರಣದಲ್ಲಿ ಈಗ ಮತ್ತೊಂದು ಆಘಾತಕಾರಿ ಹಾಗೂ ರೋಮಾಂಚನಕಾರಿ ಸತ್ಯ ಬಯಲಾಗಿದೆ. ಪ್ರಕರಣದ ಮುಖ್ಯ ಆರೋಪಿ ರಾಜಕುಮಾರ್, ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ (POCSO) ಪ್ರಕರಣದಿಂದ ಪಾರಾಗಲು ಬರೋಬ್ಬರಿ 20 ಲಕ್ಷ ರೂಪಾಯಿ ಲಂಚದ ಡೀಲ್ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ರಾಜಕುಮಾರ್‌ನಿಂದ ಭಾರಿ ಪ್ರಮಾಣದ ಹಣ ಕೈಬದಲಾದ ಹಿನ್ನೆಲೆಯಲ್ಲಿ, ಅಂದಿನ ತನಿಖಾಧಿಕಾರಿಗಳು ಆತನಿಗೆ ಕಾನೂನಿನ ರಕ್ಷಣೆ ನೀಡಲು ಮುಂದಾಗಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಠಿಣವಾದ…