ಆನೇಕಲ್: ತಾಲ್ಲೂಕಿನ ದೊಮ್ಮಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಬೃಹತ್ ಓವರ್ ಹೆಡ್ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಕುಸಿದು ಬೀಳುವ ಭೀತಿ ಎದುರಾಗಿದೆ. ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಈ ಟ್ಯಾಂಕ್ ಅನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಸ್ಥಳೀಯ ಸಾರ್ವಜನಿಕರು ಹಾಗೂ ರೋಗಿಗಳ ಸಂಬಂಧಿಕರು ತೀವ್ರವಾಗಿ ಒತ್ತಾಯಿಸಿದ್ದಾರೆ. ಆಸ್ಪತ್ರೆಗೆ ನಿತ್ಯ ನೂರಾರು ರೋಗಿಗಳು, ಸಾರ್ವಜನಿಕರು ಹಾಗೂ ಸಿಬ್ಬಂದಿ ಭೇಟಿ ನೀಡುತ್ತಾರೆ. ಆಸ್ಪತ್ರೆಯ ಆವರಣದಲ್ಲೇ ಇರುವ ಈ ಶಿಥಿಲಗೊಂಡ ನೀರಿನ ಟ್ಯಾಂಕ್‌ನ ಸಿಮೆಂಟ್…
ರಾಮದುರ್ಗ/ಬೆಳಗಾವಿ: ಸಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರ ಜಾಲವನ್ನು ಬೇಧಿಸುವಲ್ಲಿ ಕಟಕೋಳ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ 40 ಮೊಬೈಲ್ ಫೋನ್‌ಗಳು ಹಾಗೂ 2 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಹಿನ್ನೆಲೆ ದಿನಾಂಕ 23/05/2026 ರಂದು ಸಾಲಹಳ್ಳಿ ಗ್ರಾಮದ ಕಾಯಿಪಲ್ಲೆ ಸಂತೆಗೆ ತೆರಳಿದ್ದ ಬಿಜಗುಪ್ಪಿ ಗ್ರಾಮದ ಸಹ ಶಿಕ್ಷಕ ನೀಲಪ್ಪ ಸಣ್ಣತಮ್ಮಪ್ಪ ಸಕ್ರಿ (48)…