ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಹೂಳು ಹಾಗೂ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್‌ವೊಂದು ಮುಳುಗಡೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಸುರೇಂದ್ರ ಹರಿಕಂತ್ರ ಅವರಿಗೆ ಸೇರಿದ ‘ಲಕ್ಷ್ಮೀ ಕೃಪಾ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿದ್ದಾಗ ತದಡಿ ಬಂದರಿನ ಅಳವೆಯಲ್ಲಿ ತುಂಬಿಕೊಂಡಿದ್ದ ಹೂಳಿನಲ್ಲಿ ಸಿಲುಕಿಕೊಂಡಿದೆ. ಈ ವೇಳೆ ಅಪ್ಪಳಿಸಿದ ಭಾರೀ ಅಲೆಗಳ ರಭಸಕ್ಕೆ ಬೋಟ್‌ನ ತಳಭಾಗ ಸಂಪೂರ್ಣ ಹಾನಿಗೊಳಗಾಗಿ…
ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದಲ್ಲಿ ನಡೆದ ೨೦ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಅನುಪಮಾ ಸಾವಿನ ಪ್ರಕರಣಕ್ಕೆ ಇದೀಗ ಸ್ಫೋಟಕ ತಿರುವು ಸಿಕ್ಕಿದ್ದು, ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಮನೆಯ ಎದುರಿನ ನಿವಾಸಿಯಾಗಿರುವ ಅಕ್ಷಯ ಎಂಬ ವಿವಾಹಿತ ಯುವಕನ ವಿರುದ್ಧ ಮೃತ ಅನುಪಮಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಕ್ಷಯ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದ, ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಅಲ್ಲದೆ…