ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಹೆದ್ದಾರಿಯಲ್ಲೇ ಯುವಕರ ಪಡೆ ಡೆಡ್ಲಿ ಬೈಕ್ ವ್ಹೀಲಿಂಗ್ ನಡೆಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಿಗ್ಗೆಯಿಂದಲೇ ಗಿಜಿಗುಡುವ ಬಿಡುವಿಲ್ಲದ ಹೊಸೂರು ಮುಖ್ಯರಸ್ತೆಯಲ್ಲಿ, ಅದೂ ನೇರವಾಗಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ ಈ ಪುಂಡಾಟಿಕೆ ನಡೆದಿದೆ. ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಜೀವದ ಹಂಗು ತೊರೆದು ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ನಡೆಸುತ್ತಿರುವ ದೃಶ್ಯಗಳನ್ನು ಹಿಂದಿನಿಂದ ಬಂದ ಕಾರು ಚಾಲಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಪ್ರಸ್ತುತ ಈ…
ಮದ್ದೂರು: ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಎಸಗಿದ ಚಾಲಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ. ವೃತ್ತದ ಬಳಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದ ಹರೀಶ್ ಎಂಬಾತನೇ ಈ ಅಪಘಾತ ಎಸಗಿದ ಚಾಲಕ. ಮನೆಯಲ್ಲಿ ಯಾರಿಗೂ ಹೇಳದೆ ಕಾರು ತೆಗೆದುಕೊಂಡು ಬಂದಿದ್ದ ಈತ, ಮದ್ದೂರಿನ KSRTC ಬಸ್ ನಿಲ್ದಾಣ ಹಾಗೂ ಟಿ.ಬಿ. ವೃತ್ತದ ಬಳಿ ಸಿಕ್ಕ ಸಿಕ್ಕ…