ಕೃಷ್ಣರಾಜಪೇಟೆ: ತಾಲೂಕಿನ ನಾರ್ಗೋನಹಳ್ಳಿ ಗ್ರಾಮದಲ್ಲಿ ಹಳೆಯ ಮನೆಯ ಮೇಲ್ಚಾವಣಿ ಹಾಗೂ ಗೋಡೆಗಳು ಕುಸಿದು ಬಿದ್ದಿದ್ದು, ಮಂಜುಳಾ ಸಣ್ಣರಾಜು ಅವರ ಕುಟುಂಬ ತೀವ್ರ ಆತಂಕದ ವಾತಾವರಣದಲ್ಲಿ ದಿನ ದೂಡುವಂತಾಗಿದೆ. ಸುಮಾರು 25 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಈ ಮನೆಯ ಗೋಡೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಮೇಲ್ಚಾವಣಿಯೂ ಹಾನಿಯಾಗಿದೆ. ಮಳೆ ಹಾಗೂ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಯಾವ ಕ್ಷಣದಲ್ಲಿ ಮನೆ ಕುಸಿದು ಬೀಳುತ್ತದೆಯೋ ಎಂಬ ಭಯದಲ್ಲೇ ಕುಟುಂಬಸ್ಥರು ಕಾಲ ಕಳೆಯುತ್ತಿದ್ದಾರೆ. ಅಧಿಕಾರಿಗಳ ಅಲೆದಾಟ, ಪರಿಹಾರ ಸಿಗದ ನಿರಾಶೆ: ಸುರಕ್ಷಿತ…
ಹುಬ್ಬಳ್ಳಿ: ಕೈಯಲ್ಲಿ ಮಾರಕಾಸ್ತ್ರ ಹಿಡಿದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಳೆ ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿ ಗಂಗಾಧರ ಮಡಿವಾಳರ ಬಂಧಿತ ಆರೋಪಿ. ಸಾರ್ವಜನಿಕ ಸ್ಥಳದಲ್ಲಿ ಕತ್ತಿ ಹಿಡಿದುಕೊಂಡು ಫೋಟೋ ಹಾಗೂ ವೀಡಿಯೋ ಮಾಡಿಕೊಂಡಿದ್ದ ಈತ, ಅದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದ. ಇದರಿಂದ ಸಾರ್ವಜನಿಕ ವಲಯದಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಕಸಬಾ ಪೇಟೆ ಠಾಣೆಯ ಪೊಲೀಸರು ಆರೋಪಿಯ…