ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಜೆ.ಸಿ. ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಗಳನಹಳ್ಳಿ ಗ್ರಾಮದಲ್ಲಿ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆಯಡಿ ಪ್ರಗತಿಯಲ್ಲಿರುವ ಗೋಕಟ್ಟೆ ಅಭಿವೃದ್ಧಿ ಕಾಮಗಾರಿಯನ್ನು ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ರವರು ಪ್ರತ್ಯಕ್ಷವಾಗಿ ವೀಕ್ಷಿಸಿ, ಸ್ಥಳ ಪರಿಶೀಲನೆ ನಡೆಸಿದರು. ರೈತರೊಂದಿಗೆ ಸಮಾಲೋಚನೆ & ಹಾನಿ ಪರಿಶೀಲನೆ: ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಉಪಮುಖ್ಯಮಂತ್ರಿಗಳು, ಸ್ಥಳೀಯ ರೈತರೊಂದಿಗೆ ನೇರ ಸಮಾಲೋಚನೆ ನಡೆಸಿದರು. ಪ್ರಸಕ್ತ ಸಾಲಿನ…
ಹೊಸಕೋಟೆ: ಕೆಲಸ ನೀಡಿ ಆಸರೆ ಕೊಟ್ಟ ಮನೆಗೇ ಕನ್ನ ಹಾಕಿ, ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದ ಖಾಸಗಿ ವಿಲ್ಲಾದಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದಷ್ಟೇ ನೇಪಾಳ ಮೂಲದ ವ್ಯಕ್ತಿಯೊಬ್ಬ ಈ ಖಾಸಗಿ ವಿಲ್ಲಾಗೆ ಭದ್ರತಾ ಸಿಬ್ಬಂದಿಯಾಗಿ (ಸೆಕ್ಯೂರಿಟಿ ಗಾರ್ಡ್) ಕೆಲಸಕ್ಕೆ ಸೇರಿಕೊಂಡಿದ್ದ. ತರುವಾಯ, ತನ್ನ ಪತ್ನಿಗೂ ಕೆಲಸ ಕೊಡಿಸುವಂತೆ ಮನೆ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದ. ದಂಪತಿಯ ಬಡತನ ಕಂಡು ಕರುಣೆ ತೋರಿದ ಮಾಲೀಕರು…