Skip to main content

Police Roundup

ರಾಜ್ಯ ಸುದ್ದಿ

ವಿದ್ಯುತ್ ಸ್ಪರ್ಶಿಸಿ ನವಿಲು ಸಾವು…! ನವಿಲನ್ನು ತಿನ್ನಲು ಹೋದ ಚಿರತೆಗೂ ಅದೇ ಗತಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಚಿರತೆ ಸಾವು — ಕಬ್ಬಿನಕೆರೆಯಲ್ಲಿ ವಿಚಿತ್ರ ಘಟನೆ

ಚಿತ್ರದುರ್ಗ: ನವಿಲೊಂದು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದು, ಅದನ್ನು ತಿನ್ನಲು ಹೋದ ಚಿರತೆಯೂ ವಿದ್ಯುತ್ ಅವಘಡಕ್ಕೆ ಬಲಿಯಾಗಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಮೃತಪಟ್ಟಿರುವ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಬ್ಬಿನಕೆರೆ ಗ್ರಾಮದಲ್ಲಿ ನಡೆದಿದೆ.   ಕಬ್ಬಿನಕೆರೆ ಗ್ರಾಮದ ಕುಡಿಯುವ ನೀರಿನ ವ್ಯವಸ್ಥೆಗೆ ಅಳವಡಿಸಲಾಗಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬಳಿ ಈ ಘಟನೆ ಸಂಭವಿಸಿದೆ. ವಿದ್ಯುತ್ ಸ್ಪರ್ಶದಿಂದ ನವಿಲು ಮೃತಪಟ್ಟಿದೆ ಎನ್ನಲಾಗಿದ್ದು, ಅದರ ಮೃತದೇಹವನ್ನು ತಿನ್ನಲು ಅಥವಾ ಎತ್ತಿಕೊಂಡು ಹೋಗಲು ಪ್ರಯತ್ನಿಸಿದ ವೇಳೆ ಚಿರತೆ ಕೂಡ ವಿದ್ಯುತ್ ಪ್ರವಾಹಕ್ಕೆ ಸಿಲುಕಿದೆ…

Read More

ಬಸ್ ಹತ್ತುವಾಗ ಬಿದ್ದು ವಿದ್ಯಾರ್ಥಿನಿಗೆ ಗಾಯ — TMEA ಕಾಲೇಜ್ ಎದುರು ಕಡ್ಡಾಯ ಬಸ್ ತಡೆಗೆ SFI ಆಗ್ರಹ, KSRTC ಅಧಿಕಾರಿಗೆ ಮನವಿ

ಹಾವೇರಿ: ನಗರದ ಟಿಎಮ್‌ಇಎ (TMEA) ಶಿಕ್ಷಣ ಸಂಸ್ಥೆಯ ಎದುರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳನ್ನು ಕಡ್ಡಾಯವಾಗಿ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (SFI) TMEA ಕಾಲೇಜು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.   ​ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ TMEA ಶಿಕ್ಷಣ ಸಂಸ್ಥೆ ಎದುರು ಬಸ್‌ಗಳನ್ನು ಕಡ್ಡಾಯವಾಗಿ ನಿಲ್ಲಿಸದೆ ಚಾಲಕರು ವೇಗವಾಗಿ ಚಲಾಯಿಸುತ್ತಿದ್ದಾರೆ. ಪರಿಣಾಮ, ಬಸ್ ಹತ್ತುವಾಗ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಈ…

Read More

Solverwp- WordPress Theme and Plugin